logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಶಾಸಕ ಎ.ಸಿ.ಶ್ರೀನಿವಾಸ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಭೋವಿ ಸಮಾಜ ಒತ್ತಾಯ

ದೇವನಹಳ್ಳಿ: ಕರ್ನಾಟಕ ರಾಜ್ಯದಲ್ಲಿ ಭೋವಿ ಜನಾಂಗವು 25 ರಿಂದ 30 ಲಕ್ಷ ಜನಸಂಖ್ಯೆ ಇದ್ದು, ಹೆಚ್ಚಿನ ಭೋವಿ ಸಮಾಜವು ಕಾಂಗ್ರೆಸ್ಸನ್ನು ತಲಾ ತಲಾಂತರಗಳಿಂದ ಬೆಂಬಲಿಸುತ್ತಾ ಬಂದಿರುವ ಹಾಲಿ ಪುಲಿಕೇಶಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಎ.ಸಿ.ಶ್ರೀನಿವಾಸ್ ಅವರಿಗೆ ಸಚಿವ ಸಂಪುಟದಲ್ಲಿ ಸಚಿವರಾಗಿ ಸ್ಥಾನ ನೀಡಬೇಕೆಂದು ಭೋವಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಮುರಳಿ (ಬಂಡೆ) ಒತ್ತಾಯಿಸಿದರು.

ಎ.ಸಿ.ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷಕ್ಕಾಗಿ ಸುಮಾರು 30 ವರ್ಷಗಳಿಂದ ಸಂಘಟಿತ ಪಕ್ಷದ ಕೆಲಸ ಮಾಡಿಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ನಿಭಾಯಿಸುತ್ತಾ ಬಂದಿದ್ದು ಇವರಿಗೆ ಹೊಸದಾಗಿ ರಚನೆ ಆಗುವ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ಕೊಟ್ಟು ಸಮಾಜದ ಪ್ರಾತಿನಿಧ್ಯ ಕೊಡಬೇಕು ಎಂದು ದೇವನಹಳ್ಳಿ ತಾಲೂಕು ಭೋವಿ ಸಂಘದ ಪರವಾಗಿ ಆಗ್ರಹಿಸಿದ್ದಾರೆ.

ಚಿತ್ರ: ಎ.ಸಿ.ಶ್ರೀನಿವಾಸ್

1
678 views

Comment