logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ವರ್ಗಾವಣೆ ಆದೇಶ ಉಲ್ಲಂಘನೆ ಆರೋಪ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೀದರ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಹಾಗೂ ಸಂತಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇಮಾಲಪ್ಪ ಕೆ. ಅವರು ವರ್ಗಾವಣೆ ಆದೇಶ ಹೊರಡಿಸಿದ್ದರೂ ಇನ್ನೂ ಕರ್ತವ್ಯದಿಂದ ಬಿಡುಗಡೆಯಾಗದೆ ಬೀದರ್ ಜಿಲ್ಲೆಯಲ್ಲೇ ಕಾರ್ಯನಿರ್ವಹಿಸುತ್ತಿರುವ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.

ರಾಹುಲ್ ಗಾಂಧಿ ವಿಚಾರ ಮಂಚ ಜಿಲ್ಲಾಧ್ಯಕ್ಷರಾದ ಪ್ರೇಮನಾಥ್ ಆರ್. ಗಾಂವಕರ್ ಅವರು ಸಲ್ಲಿಸಿರುವ ದೂರಿನಲ್ಲಿ, ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಮೇ 27, 2026ರಂದು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಆದೇಶ ಹೊರಡಿಸಿದ್ದರು ಎಂದು ಉಲ್ಲೇಖಿಸಿದ್ದಾರೆ.

ಆದರೆ ಆದೇಶ ಹೊರಡಿಸಿ ಸುಮಾರು 12 ದಿನಗಳು ಕಳೆದರೂ ಸಂಬAಧಿತ ಅಧಿಕಾರಿಗಳು ಇನ್ನೂ ಕರ್ತವ್ಯದಿಂದ ಬಿಡುಗಡೆಯಾಗದೆ ಬೀದರ್ ಜಿಲ್ಲೆಯಲ್ಲೇ ಸೇವೆ ಮುಂದುವರಿಸುತ್ತಿದ್ದಾರೆ. ಇದರಿಂದ ಇಲಾಖೆಯ ವರ್ಗಾವಣೆ ಆದೇಶವನ್ನು ಉಲ್ಲಂಘಿಸಿರುವAತಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ವರ್ಗಾವಣೆ ಆದೇಶವನ್ನು ಪಾಲಿಸದ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪ್ರೇಮನಾಥ್ ಆರ್. ಗಾಂವಕರ್ ಅವರು ಮನವಿ ಮಾಡಿದ್ದಾರೆ.

4
1529 views

Comment